ಗೋವಾ : ಚೇತನ ಪ್ರತಿಷ್ಠಾನ, ಧಾರವಾಡ ಹಾಗೂ ಕರ್ನಾಟಕ ಚಲನಚಿತ್ರ ಕಲಾವಿದರ ಕ್ಷೇಮಾಭಿವೃದ್ಧಿ ಮಂಡಳಿ, ಬೆಂಗಳೂರು ಇವರ ಸಹಯೋಗದಲ್ಲಿ ಗೋವಾ ರಾಜ್ಯದ ಪಣಜಿಯಲ್ಲಿ “ವಿಶ್ವ ಕನ್ನಡ ಸಮ್ಮೇಳನ”ವನ್ನು ಆಯೋಜಿಸಲಾಗಿದೆ. ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಗೀತ ಹಾಗೂ ಸಂಸ್ಕೃತಿಯ ವೈಭವವನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಉದ್ದೇಶದಿಂದ ಈ ಸಮ್ಮೇಳನ ನಡೆಯಲಿದೆ.


ಸಮ್ಮೇಳನವು ಮೇ 24, 2026 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಪಣಜಿ–ಗೋವಾದಲ್ಲಿ ನಡೆಯಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಕಲಾವಿದರು, ಸಾಹಿತ್ಯಾಸಕ್ತರು ಹಾಗೂ ಕನ್ನಡಾಭಿಮಾನಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕಾವ್ಯ ವಾಚನ, ನೃತ್ಯ, ಸಂಗೀತ, ಕನ್ನಡ ಚಲನಚಿತ್ರ ಚರ್ಚೆ, ಸಾಂಸ್ಕೃತಿಕ ಪ್ರದರ್ಶನಗಳು ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭಗಳು ವಿಶೇಷ ಆಕರ್ಷಣೆಯಾಗಿವೆ.
ಖ್ಯಾತ ಸಾಹಿತಿ ಹಾಗೂ ಚಿಂತಕರಾದ ಡಾ. ರಾಜಶೇಖರ ಮಠಪತಿ, ನಟ ಹಾಗೂ ನಿರ್ದೇಶಕರಾದ ಡಾ. ವಿ. ನಾಗೇಂದ್ರ ಪ್ರಸಾದ್, ಆರ್ ರಮಾ ಸೇರಿದಂತೆ ಹಲವು ಗಣ್ಯರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಮಹಿಳಾ ಸಾಧಕರಿಗೂ ವಿಶೇಷ ಗೌರವ ನೀಡಲಾಗುತ್ತಿದೆ.


ಸಮ್ಮೇಳನದ ಆಯೋಜಕರಾದ ಡಾ. ಚಂದ್ರಶೇಖರ ಮಾಡಲಗೇರಿ ಅವರು ಮಾತನಾಡಿ, “ಗೋವಾದಲ್ಲಿ ಕನ್ನಡದ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಜಗತ್ತಿನ ಕನ್ನಡಿಗರನ್ನು ಒಂದೇ ವೇದಿಕೆಯಲ್ಲಿ ಸೇರಿಸುವ ಪ್ರಯತ್ನ ಇದಾಗಿದೆ” ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸಂಖ್ಯೆ: 99868 21096.

Leave a comment