
ಬೆಂಗಳೂರು, ಆ. 24 : ಪ್ರಕೃತಿ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಾಣದ ಉದ್ದೇಶದಿಂದ NHR & ACB ಸಂಸ್ಥೆ ಹಾಗೂ ಯುವ ಜನತಾದಳ (ಸಂಯುಕ್ತ) ಪಕ್ಷದ ಜಂಟಿ ಆಶ್ರಯದಲ್ಲಿ ‘ಲಕ್ಷ್ಯವೃಕ್ಷ ಅಭಿಯಾನ’ ಹಮ್ಮಿಕೊಳ್ಳಲಾಗಿದೆ.
ಅಭಿಯಾನದ ಉದ್ಘಾಟನಾ ಸಮಾರಂಭವು ಆಗಸ್ಟ್ 24, 2026ರ ಸೋಮವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ವಿದ್ಯಾರಣ್ಯಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜೆಡಿಯು ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಮಹಿಮಾ ಪಟೇಲ್ ಅವರು ಉದ್ಘಾಟಿಸಲಿದ್ದು, ಯುವ ಜನತಾದಳ (ಜೆಡಿಯು) ರಾಜ್ಯಾಧ್ಯಕ್ಷರು,ರಾಷ್ಟ್ರೀಯ ಸೂಕ್ಷ್ಮ,ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಂಸ್ಥೆಯ (ni-msme) ಆಡಳಿತ ಮಂಡಳಿ (Governing Council) ನಿರ್ದೇಶಕರಾದ ಡಾ. ಕೆ. ನಾಗರಾಜ್ ಅವರು, NHR&ACB ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಪ್ರಭು ಡಿ ಜೆ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಪರಿಸರ ಸಂರಕ್ಷಣೆ, ಮರಗಳ ಬೆಳೆಸುವಿಕೆ ಹಾಗೂ ಹಸಿರು ಪರಿಸರ ನಿರ್ಮಾಣದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಮುಂದಿನ ಪೀಳಿಗೆಗೆ ಸ್ವಚ್ಛ ಹಾಗೂ ಹಸಿರು ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಆಯೋಜಕರು ಮನವಿ ಮಾಡಿದ್ದಾರೆ.
ಅಭಿಯಾನದ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾರ್ವಜನಿಕರು, ಪರಿಸರಾಸಕ್ತರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು NHR & ACB ರಾಷ್ಟ್ರೀಯ ಉಪಾಧ್ಯಕ್ಷರಾದ ಸಾಯಿ ಚೇತನ್ ಡಿ. ಅವರು ಮನವಿ ಮಾಡಿದ್ದಾರೆ.
“ಬನ್ನಿ, ಕೈಜೋಡಿಸಿ… ಭೂಮಿಯನ್ನು ಹಸಿರಾಗಿಸೋಣ!” ಎಂಬ ಸಂದೇಶದೊಂದಿಗೆ ‘ಲಕ್ಷ್ಯವೃಕ್ಷ ಅಭಿಯಾನ’ಕ್ಕೆ ಚಾಲನೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ವರದಿ: ಬಿ ನ್ಯೂಸ್ ಕನ್ನಡ
